ಪತ್ನಿ ತೀರಿಕೊಂಡ ಬೇಸರದಿಂದ ಪತಿ ಆತ್ಮಹತ್ಯೆ

Boy Suside+1
Published on

ಹಾನಗಲ್ಲ: ಪತ್ನಿ ತೀರಿಕೊಂಡಿರುವುದನ್ನು ಮನಸ್ಸಿಗೆ ಹಚ್ಚಿಕೊಂಡ ಪತಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ಪಟ್ಟಣದ ಗಂಗಾನಗರದಲ್ಲಿ ಸೋಮವಾರ ನಡೆದಿದೆ.
ಸುರೇಶ ಬಸವಂತಪ್ಪ ಬಂಗಾರಿ (42) ಮೃತ ಪತಿ.
ಈತನ ಪತ್ನಿ ತೀರಿಕೊಂಡ ಹಿನ್ನೆಲೆಯಲ್ಲಿ ಅದನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ. ಇದರಿಂದ ಮನನೊಂದು ಮನೆಯಲ್ಲಿಯೆ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net