ಎರಡನೇ ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ

Boy Suside+1
Published on

ಶಿಗ್ಗಾಂವಿ: ಎರಡನೇ ಪತ್ನಿ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುಗಳಿ ರಸ್ತೆಯ ಶಿವಬಸವ ನಗರದಲ್ಲಿ ಸಂಭವಿಸಿದೆ.
ಶೇಖಪ್ಪ ಫಕ್ಕೀರಪ್ಪ ಕುರುಬರ (65) ಮೃತ ವ್ಯಕ್ತಿ.
ಈತನ ಎರಡನೇ ಪತ್ನಿ ಎರಡು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ಪತಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net