ಮೂರನೇ ಪತಿಯಿಂದ ಪತ್ನಿ ಕೊಲೆ

WhatsApp Image 2023-11-25 at 8.18.03 PM
Published on

ಹೂವಿನಹಡಗಲಿ(ವಿಜಯನಗರ): ಕುತ್ತಿಗೆ ಹಿಸುಕಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೂಲತಃ ಹೆ.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಡಿಂಪಲ್ (೩೬ ವರ್ಷ) ಕೊಲೆಯಾದ ಮಹಿಳೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಉಲವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಡಿಂಪಲ್ ಕೆಳೆದ ವರ್ಷ ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿತಾಂಡಾದ ನಿವಾಸಿ ಹಾಗೂ ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯಕೇಂದ್ರದ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಕಾಂತನನ್ನು ಪ್ರೀತಿಸಿ ಮದುವೆಯಾಗಿದ್ದಳು.

ಡಿಂಪಲ್ ಗೆ ಇದು ಮೂರನೆಯ ಮದುವೆ, ಶ್ರೀಕಾಂತನಿಗೆ ಎರಡನೆ ಮದುವೆಯಾಗಿತ್ತು. ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಗಳು ಅನ್ಯೋನ್ಯ ವಾಗಿ ಜೀವನ ಸಾಗಿಸುತ್ತಿದ್ದರು.

ಶುಕ್ರವಾರ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿಯ ಕೊಲೆ ಮಾಡಿದ ನಂತರ ಶ್ರೀಕಾಂತ ಗ್ರಾಮದ ಪೊಲೀಸ್ ಠಾಣೆಗೆ ತೆರಳಿ ಹೆಂಡತಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಟ್ಟಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net