ಪತ್ನಿಯ ಕೊಲೆ ಪ್ರಕರಣ ಅಪರಾಧಿಗೆ 7 ವರ್ಷ ಕಠಿಣ ಸಜೆ

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಗೆ ಹಲ್ಲೆ ನಡೆಸಿ ಸಾವಿಗೆ ಕಾರಣನಾದ ಪತಿಯ ಆರೋಪ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಈ ಪ್ರಕರಣದಲ್ಲಿ ಅಪರಾಧಿಗೆ 7ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ವಿಸಿದೆ.


ಧರ್ಮಸ್ಥಳ ನೆರಿಯ ಗ್ರಾಮದ ನೆರಿಯಕಾಡು ಕೊಟ್ಟಕ್ಕರ ನಿವಾಸಿ ಜಾನ್ಸನ್ ಕೆ.ಎಂ(41) ಶಿಕ್ಷೆಗೊಳಗಾದ ಅಪರಾಧಿ.
ಪ್ರಕರಣ ವಿವರ: 2021ರ ರ ಜ. 7ರಂದು ರಾತ್ರಿ ಜಾನ್ಸನ್ ಪತ್ನಿ ಸೌಮ್ಯ ್ರಾನ್ಸಿಸ್(36) ಜತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿ, ದೊಣ್ಣೆಯಿಂದ ಹಲ್ಲೆ ಮಾಡಿದ್ದ. ಗಂಭೀರ ಗಾಯಗೊಂಡ ಸೌಮ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಕುರಿತು ಸೌಮ್ಯ ಅವರ ಸೋದರ ಸನೋಜ್ ್ರಾನ್ಸಿಸ್ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 498(ಎ) ಹಾಗೂ 302ರನ್ವಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಬಳಿಕ ಧರ್ಮಸ್ಥಳ ಠಾಣೆಗೆ ವರ್ಗಾಯಿಸಲ್ಪಟ್ಟಿತು.


ಪ್ರಕರಣಕ್ಕೆ ಸಂಬಂಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಸಮಗ್ರ ವಿಚಾರಣೆ ನಡೆಸಿ ಐಪಿಸಿ 498 (ಎ) ರಡಿ 3ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 6ತಿಂಗಳು ಸಜೆ, ಐಪಿಸಿ 302ರಡಿ 7ವರ್ಷ ಕಠಿಣ ಸಜೆ ಮತ್ತು 10ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲಿ 1ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ. ಅಪರಾಧಿ ಏಕಕಾಲಕ್ಕೆ ಶಿಕ್ಷೆ ಅನುಭವಿಸಬಹುದಾಗಿದೆ.


ಪ್ರಕರಣದಲ್ಲಿ ಬೆಳ್ತಂಗಡಿ ವತ್ತದ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಡಾ. ಸೂರಜ್ ಶೆಟ್ಟಿ ಮರಣೋತ್ತರ ಪರೀಕ್ಷೆ ನಡೆಸಿ ವರದಿ ನೀಡಿದ್ದರು.ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಒ.ಎಂ. ಕ್ರಾಸ್ತಾ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net