ಪತ್ನಿ ಹತ್ಯೆ ಮಾಡಿ ಪತಿ ಆತ್ಮಹತ್ಯೆ

Untitled-2
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್​.ಪಿ ಸಿ.ಕೆ.ಬಾಬಾ ಮತ್ತಿತರೆ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿರುವುದು.
Published on

ವಿಜಯಪುರ: ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಮಂಗಳವಾರ ದಂಪತಿ ನಡುವಿನ ಕಲಹ ಪತಿ ಹಾಗೂ ಪತ್ನಿ ಸಾವಿನಲ್ಲಿ ಅಂತ್ಯವಾಗಿದೆ. ವೆಲ್ಡಿಂಗ್​ ಶಾಪ್​ ಮಾಲೀಕ ಬಸವಾಚಾರಿ (46) ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಸುಮಾ (38) ಹತ್ಯೆಯಾಗಿದೆ. ದಂಪತಿ ನಡುವಿನ ಜಗಳ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಕಬ್ಬಿಣದ ಡಂಬಲ್ಸ್​ನಿಂದ ಹಲ್ಲೆ ಮಾಡಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ, ನಂತರ ಮನೆಯಲ್ಲಿ ್ಯಾನ್​ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬ ಮಗ ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಸಂಬಂಧಿಕರಿಗೆ ಮಾಹಿತಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪತಿ ಡೆತ್​ನೋಟ್​ ಬರೆದಿಟ್ಟಿದ್ದು ಪೊಲೀಸ್​ ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಎಸ್​ಪಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ ಹಾಗೂ ಪೊಲೀಸ್​ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net