ಪರಪುರುಷನೊಂದಿಗೆ ಓಡಿಹೋದ ಪತ್ನಿ; ನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ..

Giridhar
Published on

ರಾಯಚೂರು: ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುರಗುಂಟಾದಲ್ಲಿ ಈ ಘಟನೆ ನಡೆದಿದೆ.

ಗಿರಿಧರ (42) ಆತ್ಮಹತ್ಯೆ ಮಾಡಿಕೊಂಡ ಪತಿ. ಖಾಸಗಿ ಶಾಲೆಯ ಶಿಕ್ಷಕ ಆಗಿರುವ ಇವರ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಳು. ಇದರಿಂದ ತೀವ್ರವಾಗಿ ನೊಂದ ಶಿಕ್ಷಕ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಓಡಿಹೋದವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಹಟ್ಟಿ ಚಿನ್ನದ ಗಣಿ ಪೊಲೀಸ್‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net