ಹಂದಿ ದಾಳಿಗೆ ಮಹಿಳೆ ಸಾವು

wild
Published on

ಕೋಟ: ಇಲ್ಲಿನ ವಡ್ಡರ್ಸೆ ಗ್ರಾಪಂ ವ್ಯಾಪ್ತಿಯ ಕುದ್ರುಮನೆಬೆಟ್ಟು ಪ್ರದೇಶದಲ್ಲಿ ಹಂದಿ ದಾಳಿಯಿಂದ ಗಾಯಗೊಂಡಿದ್ದ ಕಮಲಾ ದೇವಾಡಿಗ (80) ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಾರದ ಹಿಂದೆ ವಡ್ಡರ್ಸೆ ಗ್ರಾಮದ ಕುದ್ರುಮನೆಬೆಟ್ಟು ಪ್ರದೇಶದ ಭತ್ತದ ಗದ್ದೆ ವೀಕ್ಷೀಸಲು ತೆರಳುವ ಸಂದರ್ಭದಲ್ಲಿ ಕಾಡು ಹಂದಿ ಹಿಂದಿನಿಂದ ದಾಳಿಗೈದ ಪರಿಣಾಮ ದೇಹದ ಹೆಚ್ಚಿನ ಭಾಗಗಳ ಮೂಳೆ ಮೂರಿತಕ್ಕೊಳಗಾಗಿದ್ದು ತಕ್ಷಣ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನಾಕ್ರೋಶ: ಹಂದಿ ಉಪಟಳದ ಬಗ್ಗೆ ಸಾರ್ವಜನಿಕರು ಸ್ಥಳೀಯಾಡಳಿತಕ್ಕೆ ಎಚ್ಚರಿಸಿದರೂ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದ ಸ್ಥಳೀಯಾಡಳಿತದ ವಿರುದ್ಧ ಅಲ್ಲಿನ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಶೀಘ್ರದಲ್ಲಿ ಇದಕ್ಕೊಂದು ಪರಿಹಾರ ಕಾಣದಿದ್ದರೆ ಹೋರಾಟದ ಹಾದಿ ತುಳಿಯಬೇಕಾದಿತು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net