ಪಾದಚಾರಿ ಮೇಲೆ ಕಾಡುಹಂದಿ ದಾಳಿ

06 HD K01
Published on

ಎಚ್.ಡಿ.ಕೋಟೆ: ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಶನಿವಾರ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯ ಮೇಲೆ ಹಂದಿ ದಾಳಿ ಮಾಡಿ ಗಾಯಗೊಳಿಸಿದೆ.
ಗ್ರಾಮದ ನಿವಾಸಿ ಶಿವಮಲ್ಲು ಕಾಡುಹಂದಿ ದಾಳಿಯಿಂದ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಶನಿವಾರ ಬೆಳಗ್ಗೆ ಕಬಿನಿ ಜಲಾಶಯದ ಎಡದಂಡೆ ನಾಲೆಯ ಮುಖ್ಯರಸ್ತೆಯ ಬಳಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡುಹಂದಿ ದಾಳಿ ಮಾಡಿದೆ. ಇದರ ಪರಿಣಾಮ ಶಿವಮಲ್ಲು ಅವರ ಬಲಗಾಲಿಗೆ ತೀವ್ರ ಗಾಯವಾಗಿದ್ದು, ಬಲಗೈ ಮೂಳೆ ಮುರಿದು ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದುದ್ದನ್ನು ಕಂಡು ಗ್ರಾಮಸ್ಥರು ತಕ್ಷಣ ತುರ್ತು ವಾಹನದ ಮೂಲಕ ಸರಗೂರಿನ ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net