

ಸುಳ್ಯ: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾಡುಹಂದಿ ಮೃತಪಟ್ಟ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಕಾಡುಹಂದಿ ರಾತ್ರಿ ರಸ್ತೆದಾಟುತ್ತಿದ್ದ ಸಂದರ್ಭದಲ್ಲಿ ವಾಹನವೊಂದು ಢಿಕ್ಕಿ ಹೊಡೆದಿದ್ದು, ನ.27ರಂದು ಮುಂಜಾನೆ ಬಸ್ಥಳೀಯರೊಬ್ಬರು ವಾಕಿಂಗ್ ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿ ರಕ್ತದ ಗುರುತು ನೋಡಿ, ರಸ್ತೆ ಬದಿಯ ಚರಂಡಿಯಲ್ಲಿ ನೋಡಿದಾಗ ಹಂದಿ ಸತ್ತು ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸಂಪಾಜೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆದರೆ ಡಿಕ್ಕಿ ಹೊಡೆದ ವಾಹನ ಯಾವುದೆಂದು ಗೊತ್ತಾಗಿಲ್ಲ.