ಆನೆ ದಾಳಿ ಬಾಳೆ ಬೆಳೆ ನಾಶ

Wild elephant destroyed banana Plantation 2 14 JAN 20
Published on

ಚಾಮರಾಜನಗರ: ಬಾಳೆ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಸುಮಾರು ಒಂದು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಫಸಲನ್ನು ನಾಶ ಮಾಡಿರುವ ಘಟನೆ ತಾಲೂಕಿನ ಕುಂಭೇಶ್ವರ ಕಾಲನಿಯಲ್ಲಿ ನಡೆದಿದೆ.

ಗ್ರಾಮದ ರಾಜು ಎಂಬುವರು ಒಂದು ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದರು. ಸೋಮವಾರ ರಾತ್ರಿ ಜಮೀನಿಗೆ ಲಗ್ಗೆ ಇಟ್ಟ 4 ಆನೆಗಳು ಬಾಳೆ ತೋಟವನ್ನ ತುಳಿದು ತಿಂದು ಹಾಕಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಸಾಲ ಮಾಡಿ ಬಾಳೆ ಬೆಳೆ ಬೆಳೆದಿದ್ದ ರೈತ ರಾಜು ಕಂಗಾಲಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net