ಕಾಫಿ ತೋಟದಲ್ಲಿ ಕಾಡಾನೆಗಳ ದಾಂಧಲೆ

ಕಾಫಿ ತೋಟದಲ್ಲಿ ಕಾಡಾನೆಗಳ ದಾಂಧಲೆ
Published on

ನಾಪೋಕ್ಲು: ಸಮೀಪದ ಪೇರೂರು ಗ್ರಾಮದಲ್ಲಿ ನಿರಂತರ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ಸೋಮವಾರ ರಾತ್ರಿ ದಾಂಧಲೆ ನಡೆಸಿದ್ದು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ

ಬಲ್ಲಮ್ಮವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ನಿವಾಸಿ ಮಣವಟ್ಟೀರ ದಾಯ ಚಿಣ್ಣಪ್ಪ ಅವರ ತೋಟಗಳಲ್ಲಿ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಅಡಕೆ, ಕಾಫಿ, ಬಾಳೆ ಗಿಡಗಳನ್ನು ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಪರಿಕರ ಮತ್ತು ಫಸಲುಗಳಿಗೆ ಹಾನಿ ಉಂಟು ಮಾಡಿದೆ.

ಪಂದೇಟು ಕಾಲನಿ ಸೇರಿದಂತೆ ಗ್ರಾಮದ ಹಲವೆಡೆ ನಾಲ್ಕಾರು ಕಾಡಾನೆಗಳು ಅಡ್ಡಾಡುತ್ತಿದ್ದು ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಸೇರಿದಂತೆ ಇತರೆ ತೋಟದಲ್ಲೂ ಕೃಷಿ ಗಿಡಗಳನ್ನು ಕಾಡಾನೆಗಳು ಹಾಳುಗೆಡವಿದೆ. ಗ್ರಾಮದಲ್ಲಿ ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಇಲಾಖೆ ಮುಂದಾಗಬೇಕು ಹಾಗೂ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net