ನೆಲಜಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ

10.npk-1
ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ .
Published on

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸೋಮವಾರ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂತು. ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಹಾಡಹಗಲೇ ಕಾಡಾನೆಗಳನ್ನು ಕಂಡ ಗ್ರಾಮಸ್ಥರಲ್ಲಿ ಭಯಭೀತರಾದರು. ನೆಲಜಿ ಗ್ರಾಮದ ಚೀಯಕಪೂವಂಡ ಉಮೇಶ್, ಅಚ್ಛಾಂಡಿರ ಕುಟುಂಬ ಮತ್ತು ಮಣವಟ್ಟೀರ ಕುಟುಂಬಗಳ ತೋಟಗಳಿಗೆ ಕಾಡಾನೆಗಳು ಲಗ್ಗೆ ಇಟ್ಟ ಪರಿಣಾಮ ಕಾಫಿ ಮತ್ತು ಇತರ ಬೆಳೆಗೆ ಹಾನಿಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಭಾಗಮಂಡಲ ಕಕ್ಕಬೆ ಉಪವಲಯ ಅರಣ್ಯ ಅಧಿಕಾರಿ ಕಾಳೇಗೌಡ, ಅರಣ್ಯಪಾಲಕ ಶರತ್, ಅರಣ್ಯ ವೀಕ್ಷಕ ಸಚಿನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net