

ಎಚ್.ಡಿ.ಕೋಟೆ: ತಾಲೂಕಿನ ಜಿ.ಎಂ ಹಳ್ಳಿ, ಸೊಳ್ಳೆಪುರ, ಸಿದ್ದಾಪುರ ಗ್ರಾಮಗಳಲ್ಲಿ ಶುಕ್ರವಾರ ರೈತರು ಬೆಳೆದ ಬೆಳೆಗಳನ್ನು ಕಾಡಾನೆಗಳು ತುಳಿದು ನಾಶಪಡಿಸಿದ್ದು, ರೈತರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಜಮೀನಿನಲ್ಲಿ ಬೆಳೆದ ಶುಂಠಿ, ತೆಂಗು, ಅಡಕೆ ಫಸಲನ್ನು ಕಾಡಾನೆಗಳು ನಾಶಪಡಿಸಿವೆ. ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳು ಆಗಾಗ ದಾಳಿ ನಡೆಸಿ ರೈತರ ಬೆಳೆಗಳನ್ನು ಹಾನಿಮಾಡುತ್ತಿದೆ. ಎಷ್ಟು ಬಾರಿ ಮನವಿ ಮಾಡಿದರೂ ಅರಣ್ಯ ಇಲಾಖೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ದೂರಿದರು.