ಜಮೀನಿಗೆ ಕಾಡಾನೆಗಳ ದಾಳಿ

IMG-20240809-WA0158
Published on

ಹನೂರು: ತಾಲೂಕಿನ ಶಾಗ್ಯ ಗ್ರಾಮದಲ್ಲಿ ಗುರುವಾರ ರಾತ್ರಿ 2 ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟು ಮುಸುಕಿನಜೋಳದ ಸಲು ಹಾಗೂ ನೀರಾವರಿ ಪರಿಕರಗಳನ್ನು ನಾಶಪಡಿಸಿವೆ.

ಗ್ರಾಮದ ನಾಗಾರ್ಜುನ ಅವರು 5 ಎಕರೆ ಜಮೀನಿನಲ್ಲಿ ಮುಸುಕಿನಜೋಳ ಬೆಳೆದಿದ್ದು, ತೆನೆಗಳು ಬಿಟ್ಟಿದ್ದವು. ಆದರೆ ತಡರಾತ್ರಿ ಸಮೀಪದ ಅರಣ್ಯ ಪ್ರದೇಶದಿಂದ ಆಗಮಿಸಿದ 2 ಕಾಡಾನೆಗಳು ಜಮೀನಿಗೆ ಲಗ್ಗೆಯಿಟ್ಟು ಸಲನ್ನು ನಾಶಪಡಿಸಿದೆಯಲ್ಲದೆ, ನೀರಾವರಿ ಪರಿಕರ ಹಾಗೂ ಶೀಟ್‌ನಿಂದ ನಿರ್ಮಿಸಿದ್ದ ತಂತಿ ಬೇಲಿಯನ್ನು ನಾಶಪಡಿಸಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸುವುದರ ಮೂಲಕ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಮಾಲೀಕ ನಾಗಾರ್ಜುನ ಒತ್ತಾಯಿಸಿದ್ದಾರೆ.ಕಡಿವಾಣಕ್ಕೆ ಒತ್ತಾಯ: ಈ ಭಾಗದಲ್ಲಿ ಕಳೆದ 2 ವರ್ಷದಿಂದೀಚೆಗೆ ಸಮೀಪದ ಅರಣ್ಯ ಪ್ರದೇಶದಿಂದ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟು ಸಲನ್ನು ನಾಶಪಡಿಸುತ್ತಿವೆ. ಇದರಿಂದ ಕೃಷಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ರಾತ್ರಿ ವೇಳೆ ಜಮೀನಿನಲ್ಲಿ ಕಾವಲು ಕಾಯಲು ಭಯದ ವಾತಾವರಣ ಮನೆ ಮಾಡಿದೆ. ಇತ್ತ ಗ್ರಾಮ ಸಮೀಪವೇ ಕಾಡಾನೆಗಳು ಆಗಮಿಸುತ್ತಿದ್ದು, ಜನರನ್ನು ಭಯಭೀತಗೊಳಿಸುತ್ತಿವೆ. ಕಾಡಾನೆಗಳ ಹಾವಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ಕಾಡಾನೆಗಳ ಹಾವಳಿಯನ್ನು ತಪ್ಪಿಸುವಂತೆ ಈ ಭಾಗದ ರೈತರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net