

ಹಿರಿಯೂರು: ಬುಡಕಟ್ಟು ಸಂಸ್ಕೃತಿಯ ಪ್ರತೀಕವಾದ ಕಾಡುಗೊಲ್ಲರನ್ನು ಎಸ್ಟಿಗೆ ಸೇರ್ಪಡೆ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್.ಆರ್.ತಿಪ್ಪೇಸ್ವಾಮಿ ಒತ್ತಾಯಿಸಿದರು.
ಇಲ್ಲಿನ ಸಂಗೀತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮುದಾಯದ ಸಭೆಯಲ್ಲಿ ಮಾತನಾಡಿದರು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸಲು ಎಲ್ಲ ಅರ್ಹತೆ ಹೊಂದಿದೆ ಎಂದರು.
ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮ್ಯಾಕ್ಲೂರಳ್ಳಿ ತಿಮ್ಮಯ್ಯ ಮಾತನಾಡಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಇತರೆಡೆ ನೆಲೆಸಿರುವ ಕಾಡುಗೊಲ್ಲ ಸಮುದಾಯ ಕುರಿ ಸಾಕಾಣಿಕೆ, ಕಾಡು ಮೇಡು ಅಲೆದು ಜೀವನ ಸಾಗಿಸುತ್ತಿದ್ದಾರೆ. ಬುಡಕಟ್ಟು-ಶ್ರಮ ಸಂಸ್ಕೃತಿ ಹೊಂದಿದೆ. ಎಸ್ಟಿ ಸೇರ್ಪಡೆ ಬಗ್ಗೆ ವಾಸ್ತವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.