16ರಿಂದ ಮೆಟ್ರೋ ರೈಲು ಸಂಚಾರ?

city metro (FILEminimizer)
Published on

ಬೆಂಗಳೂರು: ಕರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೇಶವ್ಯಾಪಿ ಮಾಡಲಾದ ಲಾಕ್​ಡೌನ್​ನಿಂದಾಗಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲು ಸೇವೆ ಆ. 16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ.

ಹಂತಹಂತವಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ.

15ರಂದು ನಿರ್ಧಾರ: ಲಾಕ್​ಡೌನ್​ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ. ಮೆಟ್ರೋ ರೈಲು, ಚಿತ್ರಮಂದಿರಗಳು ಸೇರಿ ಇನ್ನಿತರ ಉದ್ಯಮಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಿಲ್ಲ. 15ರಂದು ಲಾಕ್​ಡೌನ್ ತೆರವಿನ ಕುರಿತ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಗಳಿವೆ.

ಮೆಟ್ರೋ ರೈಲು ಸೇವೆ ಆರಂಭಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇರುವುದರಿಂದ ಬಿಎಂಆರ್​ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲಸಕ್ಕೆ ಬರಲು ತಯಾರಿರುವಂತೆ ಸಿಬ್ಬಂದಿಗೆ ಈಗಾಗಲೆ ಸೂಚಿಸಿದೆ. ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net