ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ?

GTD
Published on


ಮತದಾರರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ ಎಂದು ಜಿ.ಟಿ.ದೇವೇಗೌಡ ತಿಳಿಸಿದರು.

ಇದು ಸಿದ್ದರಾಮಯ್ಯ ಅವರ ಸೋಲೆಂದು ಹೇಳಲಾರೆ. ಮೈತ್ರಿ ಗಟ್ಟಿಯಾಗಿದೆ ಎಂಬುದಕ್ಕೆ ಗೆಲುವು ಸಾಕ್ಷಿಯಾಗಿದೆ. ‘ಸೂರ್ಯ ಚಂದ್ರ ಇರುವವರೆಗೂ ಕುಮಾರಸ್ವಾಮಿ ಗೆಲ್ಲುವುದಿಲ್ಲ’ ಎಂದು ಸಿದ್ದರಾಮಯ್ಯ ಅನೇಕ ಬಾರಿ ಹೇಳಿದ್ದರು. ಈ ವಿಷಯದಲ್ಲಿ ಮುತ್ಸದ್ದಿಯಾಗಿ ಮಾತನಾಡಬೇಕಿತ್ತು. ಈಗ ಕುಮಾರಸ್ವಾಮಿ ಗೆದ್ದಿದ್ದಾರೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net