ಕಾರ್ಯಕರ್ತರಿಗೆ ಸೀಟ್ ಕೊಟ್ಟರೆ ರಾಜ್ಯದ ಸಮಸ್ಯೆಗಳು ಪರಿಹಾರ ಆಗುತ್ತವಾ?

HDK 18 Feb 20
Published on

ಚನ್ನಪಟ್ಟಣ (ರಾಮನಗರ): ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರನ್ನು ರಾಜ್ಯಸಭೆ ಅಭ್ಯರ್ಥಿಗಳನ್ನಾಗಿಸಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಕಾರ್ಯಕರ್ತರಿಗೆ ಅವಕಾಶ ಕೊಟ್ಟರೆ ರಾಜ್ಯದ ಸಮಸ್ಯೆಗಳು ಪರಿಹಾರ ಆಗುತ್ತವೆಯೇ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಅನುಭವಿಗಳು ಹಾಗೂ ಹಿರಿಯರ ಅಗತ್ಯವಿದೆ. ಬಿಜೆಪಿಯವರು ಯುವಕರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಿದ್ದೇವೆ ಎಂದು ಪ್ರಚಾರ ಪಡೆಯುತ್ತಾರೆ. ರಾಜ್ಯದ ಹಿತದೃಷ್ಟಿ ಅವರಿಗೆ ಕಾಣುತ್ತಿಲ್ಲ. ದೇವೇಗೌಡರ ವಯಸ್ಸಿನ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮುಂದೆ ನಿಂತು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವ ಗಟ್ಟಿಧ್ವನಿ ಬೇಕಿದೆ. ಆದ್ದರಿಂದ ದೇವೇಗೌಡರು ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net