ಸಂಕಲ್ಪ ಶಕ್ತಿಯಿಂದ ಉನ್ನತಿಗೇರಿದ ಕಳ್ಳಿಗೆ

Bdk_willpower
Published on

ಕುಂಬಳೆ: ಕ್ರಿಯಾಶಕ್ತಿ, ಧೀಶಕ್ತಿಗಳ ಮೂಲಕ ಬದ್ಧತೆ ಉಳಿಸಿಕೊಂಡಿದ್ದ ಕಳ್ಳಿಗೆ ಮಹಾಬಲ ಭಂಡಾರಿ ಸಂಕಲ್ಪ ಶಕ್ತಿಯಿಂದ ಔನ್ನತ್ಯಕ್ಕೇರಿದವರು ಎಂದು ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ಸೀತಮ್ಮ ಪುರುಷ ನಾಯಕ ಸ್ಮಾರಕ ಗ್ರಂಥಾಲಯ ವತಿಯಿಂದ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಮಂಗಳವಾರ ಸಂಜೆ ನಡೆದ ಕನ್ನಡ ಹೋರಾಟಗಾರ ಕಳ್ಳಿಗೆ ಮಹಾಬಲ ಭಂಡಾರಿ ಸ್ಮತಿ ಕಾರ್ಯಕ್ರಮದಲ್ಲಿ ಸಂಸ್ಮರಣಾ ಭಾಷಣ ಮಾಡಿದರು.

ಚಿಂತಕ ಸುಕುಮಾರ ಆಲಂಪಾಡಿ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭವನ ಸಂಸ್ಥಾಪಕ ಡಾ.ವಾಮನರಾವ್ ಬೇಕಲ್‌ಗೆ ಗೌರವಾರ್ಪಣೆ ನಡೆಯಿತು. ಗಮಕ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೇಕೆರೆ ಶಂಕರನಾರಾಯಣ ಭಟ್ ಉಪಸ್ಥಿತರಿದ್ದರು. ಶೇಖರ್ ಶೆಟ್ಟಿ ಬಾಯಾರು ಸ್ವಾಗತಿಸಿದರು. ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net