ಸಂಯುಕ್ತ ಪಾಟೀಲರನ್ನು ಬಹುಮತದಿಂದ ಗೆಲ್ಲಿಸಿ: ರಕ್ಷಿತಾ ಈಟಿ

Win Samyukta Patil with a majority
ಕಮತಗಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿದರು. ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ಶಾಸಕ ಎಚ್.ವೈ. ಮೇಟಿ, ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ ಇತರರಿದ್ದರು.
Published on

ಕಮತಗಿ: ಬಿಜೆಪಿ ನಾಯಕಿ, ಚಿತ್ರನಟಿ ಶ್ರುತಿ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ತೀವ್ರವಾಗಿ ಖಂಡಿಸಿದರು.

ಕಮತಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಟಿ ಶ್ರುತಿ ಅವರು ಮಹಿಳೆಯರ ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ತಾವು ಒಬ್ಬ ಮಹಿಳೆಯಾಗಿ ಇನ್ನೊಬ್ಬ ಮಹಿಳೆ ಬಗ್ಗೆ ಹಗರುವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರದು.

ಕಾಂಗ್ರೆಸ್ ಸರ್ಕಾರ ಮಹಿಳೆಯ ಕಲ್ಯಾಣದ ಭಾಗವಾಗಿ ಗ್ಯಾರಂಟಿಗಳಲ್ಲಿ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಜಾರಿಗೊಳಿಸಿದ್ದು, ಯಾರೂ ದುರುಪಯೋಗಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಯೋಜನೆಯಿಂದ ರಾಜ್ಯದ ಬಹುತೇಕ ಮಹಿಳೆಯರ ಪ್ರಯಾಣಕ್ಕೆ ಅನುಕೂಲವಾಗಿದೆ. ಅದನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಶ್ರುತಿ ಅವರು ಕೆಟ್ಟದಾಗಿ ಮಾತನಾಡಿರುವುದು ಖಂಡನೀಯ ಎಂದರು.

ಬಿಜೆಪಿ ಚುನಾವಣೆಗೂ ಮುನ್ನ ಜನರಿಗೆ ಬಹಳಷ್ಟು ಯೋಜನೆಗಳ ಅನುಷ್ಠಾನದ ಭರವಸೆ ನೀಡಿತ್ತು. ಯುವ ಜನರಿಗೆ 2 ಕೋಟಿ ಉದ್ಯೋಗ ನೀಡುವುದು, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುತ್ತೇವೆ, ರೈತರಿಗೆ ಸಹಾಯಧನ ನೀಡುತ್ತೇವೆ ಎಂದು ಹೇಳಿ ಆ ಭರವಸೆ ಹುಸಿಗೊಳಿಸಿದ್ದಾರೆ. ಬಿಜೆಪಿ ಮೋದಿ ಸರ್ಕಾರ ದೇಶದ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರಲ್ಲದೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರಿಗೆ ಬಹುಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿದರು. ಶಾಸಕ ಎಚ್.ವೈ. ಮೇಟಿ, ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಮುಖಂಡರಾದ ಎಸ್.ಎನ್. ರಾಂಪುರ, ರಮೇಶ ಜಮಖಂಡಿ, ಹುಚ್ಚಣ್ಣ ಸಿಂಹಾಸನ, ಮಹಾಂತೇಶ ಬ್ಯಾಳಿ, ಗುರು ಅನಗವಾಡಿ, ರಾಜು ಕುಂಬಾಳವತಿ, ಶಂಕರಪ್ಪ ಮಂಕಣಿ, ನಬಿ ತಹಸೀಲ್ದಾರ್, ಗುರು ಪಾಟೀಲ, ದೇವಿ ಪ್ರಸಾದ ನಿಂಬಲಗುಂದಿ, ತಿಮ್ಮಣ್ಣ ಹಗೇದಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net