ಡಿಸೆಂಬರ್ 22ರಂದು ಕದ್ರಿಪಾರ್ಕ್‌ನಲ್ಲಿ ವೈನ್ ಮೇಳ - ಕ್ರಿಸ್ಮಸ್ ಹಬ್ಬ, ಹೊಸ ವರ್ಷದ ಖರೀದಿಗೆ ವಿಶೇಷ ಅವಕಾಶ

mng--19 Dec wine logo
Published on

ಮಂಗಳೂರು: ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ಎರಡು ವಾರಾಂತ್ಯಗಳಲ್ಲಿ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಅಂಗವಾಗಿ ಗ್ರಾಹಕರಿಂದ ಬಂದ ಬೇಡಿಕೆ ಹಿನ್ನೆಲೆಯಲ್ಲಿ ಡಿ.22ರಂದು ಮತ್ತೆ ಕದ್ರಿ ಪಾರ್ಕ್‌ನಲ್ಲಿ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ಆಯೋಜಿಸಲಾಗಿದೆ.

ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವೈನ್ ಮೇಳ ನಡೆಯಲಿದೆ.

ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಲಾಗುತ್ತಿದೆ. ಗ್ರಾಹಕರು ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಇಷ್ಟವಾದ ಬ್ರಾೃಂಡ್‌ಗಳನ್ನು ಅತ್ಯಾಕರ್ಷಕ ದರದಲ್ಲಿ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

 ವಿಶೇಷ ಆಕರ್ಷಣೆ: ವೈನ್ ಮೇಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಬಹುದು. ಮಕ್ಕಳಿಗೆ ವಿವಿಧ ವಿನೋದಾವಳಿಗಳನ್ನು ಏರ್ಪಡಿಸಲಾಗಿದೆ. ಕ್ರಿಸ್ಮಸ್ ಕೇಕ್, ಕುಸ್ವಾರ್, ಕೊಕ್ಕೀಸ್, ನೆವ್ರೊೃೀ ಮೊದಲಾದ ಖಾದ್ಯಗಳ ಸವಿಯನ್ನು ಸವಿದು ಖರೀದಿಸಬಹುದಾಗಿದೆ. ಮಕ್ಕಳಿಗೆ ವಿವಿಧ ಪ್ಲೇವರ್‌ಗಳ ಐಸ್‌ಕ್ರೀಂ ಸಹಿತ ಹಲವು ಬಗೆಯ ಖಾದ್ಯಗಳನ್ನು ಮೇಳದಲ್ಲಿ ಜೋಡಿಸಲಾಗಿದೆ. ಭಾನುವಾರದ ಸಮಯವನ್ನು ಕಳೆಯಲು ಇದೊಂದು ಸದವಕಾಶ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net