

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ (ಡಿ.16) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ ಧನಕರ್, ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಜೋಶಿ, ವಿ.ಸೋಮಣ್ಣ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಪ್ರಮೋದ್ ಸಾವಂತ್, ಹಿಮಂತ್ ಬಿಸ್ವಾಸ್, ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸೇರಿ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ(Wishes for Kumaraswamy's birthday).
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎಕ್ಸ್ ಖಾತೆ ಮೂಲಕ ಪುತ್ರ ಕುಮಾರಸ್ವಾಮಿಯನ್ನು ಆಶೀರ್ವದಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಡಾ.ಕೆ. ಸುಧಾಕರ್, ಬಿ.ವೈ.ರಾಘವೇಂದ್ರ, ತೇಜಸ್ವಿ ಸೂರ್ಯ, ರಾಜ್ಯದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಸೇರಿ ಅನೇಕರು ಎಚ್‌ಡಿಕೆಗೆ ಶುಭ ಹಾರೈಸಿದ್ದಾರೆ.
ಸೋಮವಾರ ಬೆಳಗ್ಗೆಯೇ ಕುಮಾರಸ್ವಾಮಿ ನವದೆಹಲಿಯ ಹೌಜ್ ಕಾಸ್‌ನಲ್ಲಿರುವ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಆರ್.ಕೆ. ಪುರಂ ಸೆಕ್ಟರ್ 5ರಲ್ಲಿರುವ ರಾಷ್ಟ್ತ್ರೀಯ ವಿಶೇಷ ಚೇತನ ಮಕ್ಕಳ ಶಾಲೆಗೆ ತೆರಳಿ ಮಕ್ಕಳ ಜತೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಕ್ಕಳಿಗೆ ಸ್ವೆಟರ್, ಸಿಹಿ ಹಂಚಿ ಕೆಲ ಸಮಯ ಅಲ್ಲಿಯೇ ಕಳೆದರು.