ಶ್ವಾನದಳದೊಂದಿಗೆ ತೀವ್ರ ಪರಿಶೀಲನೆ

0101
Published on

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪೊಲೀಸರು ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ. ಸಿಸಿ ಕ್ಯಾಮರಾ, ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಸಾರ್ವಜನಿಕರ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ. ಶ್ವಾನದಳದೊಂದಿಗೆ ಪ್ರತಿಯೊಂದು ವಾಹನ ಪರಿಶೀಲಿಸಿ ಒಳಗೆ ಬಿಡಲಾಗುತ್ತಿದೆ. ವಿಮಾನ ನಿಲ್ದಾಣ ಸಮೀಪ ಸಂಚರಿಸುವ ಬಸ್‌ಗಳನ್ನೂ ಪರಿಶೀಲಿಸಲಾಗುತ್ತಿದೆ.

ರೈಲು ನಿಲ್ದಾಣದಲ್ಲಿ ಸಿ.ಸಿ. ಕ್ಯಾಮರಾ, ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದವರು ಪ್ರಯಾಣಿಕರ ಲಗೇಜ್ ತಪಾಸಣೆ ಮಾಡುತ್ತಿದ್ದಾರೆ. ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಮೆಟಲ್ ಡಿಟೆಕ್ಟರ್, ಸಿಸಿ ಕ್ಯಾಮರಾ ಅಳವಡಿಸಿಲ್ಲ. ಆದರೆ, ಬಸ್ ನಿಲ್ದಾಣದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು, ಅನುಮಾನಿತ ಪ್ರಯಾಣಿಕರ ಬ್ಯಾಗ್‌ಗಳನ್ನು ಮಾತ್ರ ಪರಿಶೀಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net