

ಚಿಕ್ಕೋಡಿ: ವಿದ್ಯಾರ್ಥಿಗಳು ಧೈರ್ಯದಿಂದ ಮುನ್ನುಗ್ಗಿದರೆ ಜೀವನದಲ್ಲಿ ಯಶಸ್ಸು ಸಾಸಲು ಸಾಧ್ಯ ಎಂದು ರಾಜ್ಯ ಹೈಕೋರ್ಟ್ ವಿಶ್ರಾಂತ ನ್ಯಾಯಾೀಶ ಅರವಿಂದ ಪಾಶ್ಚಾಪೂರೆ ಹೇಳಿದರು.
ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಬ್ರಹ್ಮಲಿಂಗೇಶ್ವರ ಮಂದಿರ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಯುವ ಸ್ಪರ್ಧಾ ಮೇಳದಲ್ಲಿ ಮಾತನಾಡಿ, ಸಮಾಜಕ್ಕೆ ಒಳ್ಳೆಯದಾಗಬೇಕೆಂಬ ಮನೋಭಾವನೆ ಬೆಳೆಸಿಕೊಳ್ಳಬೇಕು. ಐಎಎಸ್, ಕೆಎಎಸ್ ಸೇರಿ ಯಾವುದೇ ಹುದ್ದೆಯಲ್ಲಿ ಸಾಧನೆ ಮಾಡಬೇಕಾದರೆ ಶ್ರದ್ಧೆಯಿಂದ ಕಲಿಯಬೇಕು ಎಂದರು.
ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇತ್ತೀಚೆಗೆ ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಯೋಗಮಯ ಜೀವನ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಜೋಡಕುರಳಿ ಗ್ರಾಮದ ಜಗದ್ಗುರು ಸಿದ್ಧಾರೂಢ ಮಠದ ಚಿದ್ಘನಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ.ಮೋಹನ ಭಸ್ಮೆ, ವಿಶ್ವ ಹಿಂದು ಪರಿಷತ್ ಪ್ರಮುಖ ವಿಠ್ಠಲಜಿ ಬೆಳಕೂಡ, ಶರದರಾವಜೀ ಸೊಲ್ಲಾಪುರಕರ ಬ್ರಹ್ಮಲಿಂಗೇಶ್ವರ ಮಂದಿರ ಅಧ್ಯಕ್ಷ ಆರ್. ಡಿ.ಸಂಕನ್ನವರ ಇತರರಿದ್ದರು.