ಕಠಿಣ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ

13Athni2
Published on

ಅಥಣಿ: ಕಠಿಣ ಪರಿಶ್ರಮದಿಂದ ನಿರ್ದಿಷ್ಟ ಗುರಿ ತಲುಪಿದಾಗ ಹೆತ್ತವರಲ್ಲಿ ಸಂತಸ ಕಾಣಲು ಸಾಧ್ಯ ಎಂದು ಬೆಳಗಾವಿ ಮತ್ತು ಕಲಬುರ್ಗಿ ವಿಭಾಗದ ತೂಕ ಮತ್ತು ಅಳತೆ ಇಲಾಖೆಯ ಜಂಟಿ ನಿಯಂತ್ರಕ ಆರ್.ಎಸ್.ಮಾಳಿ ಹೇಳಿದರು.

ತಾಲೂಕಿನ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಚಿಕ್ಕಟ್ಟಿ ಸಂಸ್ಥೆಯ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಮಾತನಾಡಿ, ಆಧುನಿಕ ಯುಗದಲ್ಲಿ ತಂತ್ರಜ್ಞಾನದಿಂದ ಕಲಿಕೆಗಿರುವ ಅವಕಾಶಗಳನ್ನು ಉಪಯೋಗಿಸಿಕೊಂಡು ಸಾಧನೆ ಮಾಡಬಹುದು. ಪಾಲಕರಿಗೆ, ಹುಟ್ಟಿದ ಊರಿಗೆ, ಕಲಿತ ಶಾಲೆಗೆ, ಶಿಕ್ಷಕರಿಗೆ ಹೆಸರು ತರುವಂತೆ ಸಾಧನೆ ಮಾಡಬೇಕು ಎಂದರು.

ಉಮೇಶ ಹುಡೇದ, ಸಂಸ್ಥೆಯ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ, ಮುಖ್ಯಶಿಕ್ಷಕ ಟಿ.ಎ.ಮೊಗೇರ ಇತರರಿದ್ದರು. ಶಿಕ್ಷಕರಾದ ವಿಶ್ವನಾಥ ಸೌದಾಗರ ನಿರೂಪಿಸಿದರು. ಜಯಶ್ರೀ ಬೋಜನೆ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net