ಫೆ.20ರಂದು ಅಧಿಕಾರಿಗಳೊಂದಿಗೆ ಹಚ್ಚೊಳ್ಳಿಯಲ್ಲಿ ಗ್ರಾಮವಾಸ್ತವ್ಯ: ಸಿರಗುಪ್ಪ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಹೇಳಿಕೆ

Siraguppa Gramavastavya Meeting
ಸಿರಗುಪ್ಪ ತಾಲೂಕು ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿದರು.
Published on

ಸಿರಗುಪ್ಪ: ತಾಲೂಕಿನ ಹಚ್ಚೊಳ್ಳಿ ಗ್ರಾಮದಲ್ಲಿ ಫೆ.20ರಂದು ತಾಪಂ ಇಒ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಲಾಗುವುದು ಎಂದು ತಹಸೀಲ್ದಾರ್ ಎಸ್.ಬಿ.ಕೂಡಲಗಿ ಹೇಳಿದರು.

ನಗರದ ತಾಲೂಕು ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಫೆ.20ರ ಬೆಳಗ್ಗೆ 11 ಗಂಟೆಗೆ ಹಚ್ಚೊಳ್ಳಿ ಗ್ರಾಮದಲ್ಲಿ ಸಂಚರಿಸಿ ಜನರ ಸಮಸ್ಯೆ ಆಲಿಸಲಾಗುವುದು. ಆಧಾರ್ ದೋಷ, ಪಡಿತರ ಚೀಟಿ ವ್ಯತ್ಯಾಸ, ಪೌತಿ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ ಮತ್ತು ಪಿಂಚಣಿ ಸೌಲಭ್ಯ, ವೃದ್ಧಾಪ್ಯವೇತನ ಸೌಲಭ್ಯ ಅರ್ಹರಿಗೆ ಸಿಗದಿದ್ದಲ್ಲಿ ವಿತರಣೆಗೆ ವ್ಯವಸ್ಥೆ ಮಾಡಲಾಗುವುದು. ಪ್ರವಾಹ, ಬರ ಪರಿಹಾರದ ಬಗ್ಗೆಯೂ ಕ್ರಮ ವಹಿಸಲಾಗುತ್ತದೆ. ಸಣ್ಣ ಸಣ್ಣ ವಿಚಾರಕ್ಕೂ ಸಾರ್ವಜನಿಕರು ತಾಲೂಕು ಕಚೇರಿಗೆ ಅಲೆದಾಡುವಂತಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರದ ಆದೇಶದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಕೊಳ್ಳಬೇಕು ಎಂದರು. ಬಿಸಿಎಂ ಅಧಿಕಾರಿ ಎ.ಗಾದಿಲಿಂಗಪ್ಪ, ಜಿಪಂ ಉಪ-ವಿಭಾಗದ ಎಇಇ ವೀರೇಶ್ ನಾಯಕ, ಟಿಎಚ್‌ಒ ಈರಣ್ಣ, ಬಿಇಒ ಪಿ.ಡಿ.ಭಜಂತ್ರಿ, ಸಮಾಜ ಕಲ್ಯಾಣಾಧಿಕಾರಿ ಷಾಷು ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net