

ಸಿರಗುಪ್ಪ: ನಗರದಲ್ಲಿ ಬಳ್ಳಾರಿ ಜಿಲ್ಲಾ ಖನಿಜ ನಿಧಿ 2022-23ನೇ ಸಾಲಿನ ಅನುದಾದಡಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಂಗಳವಾರ ಪರಿಶೀಲನೆ ನಡೆಸಿದರು.
ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಒಳಾಂಗಣ ಕ್ರೀಡಾಂಗಣ, ಪ್ರೌಢಶಾಲೆ, ಪಿಯು ಕಾಲೇಜು, ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ಕಾಮಗಾರಿ ವೀಕ್ಷಿಸಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಇದನ್ನೂ ಓದಿ:ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ ಆರೋಪ
ಜೆಜೆಎಂ ಕಾಮಗಾರಿಯ ಕುರಿತು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ವಿನೋದ ಕುಮಾರ್ ಗುಪ್ತರಿಂದ ಮಾಹಿತಿ ಪಡೆದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಎಡಿಸಿ ಮಂಜುನಾಥ್, ತಹಸೀಲ್ದಾರ್ ಎಚ್.ವಿಶ್ವನಾಥ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ವಿನೋದ ಕುಮಾರ್ ಗುಪ್ತ, ಎಇಇ ರವೀಂದ್ರ ನಾಯ್ಕ, ಜೆಇ ಕಾಂತ್‌ರಾಜ್, ಟಿ.ಎಚ್.ಒ. ಡಾ.ಈರಣ್ಣ, ಪೌರಾಯುಕ್ತ ಕೆ.ಜೀವನ್ ಕಟ್ಟಿಮನಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೀರಭದ್ರಪ್ಪ ಇದ್ದರು.