

ಮಾನ್ವಿ: ಪಟ್ಟಣದಲ್ಲಿ ಸಿಆರ್‌ಪಿಎಫ್ ಯೋಧರು ಹಾಗೂ ಪೊಲೀಸ್ ಸಿಬ್ಬಂದಿ ಪಥ ಸಂಚಲನಕ್ಕೆ ಡಿವೈಎಸ್‌ಪಿ ವೆಂಕಟಪ್ಪನಾಯಕ ಸೋಮವಾರ ಚಾಲನೆ ನೀಡಿದರು.
ಮೇ 10 ರಂದು ನಡೆಯುವ ಮತದಾನದಲ್ಲಿ ಮತದಾರರು ನಿರ್ಭಿತಿಯಿಂದ ಮತ ಚಲಾಯಿಸಬೇಕು. ಭಯ ಮುಕ್ತವಾಗಿ ಮತ ಚಲಾಯಿಸಲು ಅಗತ್ಯವಾದ ಭದ್ರತೆಯನ್ನು ಪೊಲೀಸ್ ಇಲಾಖೆ ಕೈಗೊಂಡಿದೆ. ಹೆಚ್ಚಿನ ಭದ್ರತೆಗಾಗಿ ಪಟ್ಟಣದಲ್ಲಿ ಸಿಆರ್‌ಪಿಎಫ್ ಯೋಧರನ್ನು ನಿಯೋಜಿಸಲಾಗುವುದು. ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಆರ್‌ಪಿಎಫ್ ಇನ್‌ಸ್ಪೆಕ್ಟರ್ ನಿರಂಜನ ಸಾಹು, ಪಿಐ ವೀರಭದ್ರಯ್ಯ ಹಿರೇಮಠ ನೇತೃತ್ವದಲ್ಲಿ 70 ಜನ ಸಿಆರ್‌ಪಿಎಫ್ ಯೋಧರು ಹಾಗೂ ಪೊಲೀಸ್ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.