

ಬಂಕಾಪುರ: ಹೇಳದೆ ಕೇಳದೆ ಮನೆ ಬಿಟ್ಟು ಹೋಗಬಾರದು ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ಇಲ್ಲಿಗೆ ಸಮೀಪದ ಕುಂದೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೇಘಾ ವಿರುಪಾಕ್ಷಪ್ಪ ಕೂಡಲ (19) ಮೃತ ಯುವತಿ.
ಇವಳಿಗೆ ಮನೆಯಲ್ಲಿ ಹೇಳದೆ ಕೇಳದೆ ಮನೆ ಬಿಟ್ಟು ಹೋಗಬಾರದು ಎಂದು ಮನೆಯವರು ಬುದ್ಧಿ ಮಾತು ಹೇಳಿದ್ದಾರೆ. ಇದರಿಂದ ಬೇಸತ್ತು ಯುವತಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.