ನೀರಿಲ್ಲದೆ ಬಸ್ ನಿಲ್ದಾಣಕ್ಕಿಲ್ಲ ಉದ್ಘಾಟನಾ ಭಾಗ್ಯ

03gan4
Published on

ಗಂಗೊಳ್ಳಿ: ಬೈಂದೂರು ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಸಮರ್ಪಕ ಸಂಚಾರಕ್ಕಾಗಿ ಡಿಪೋ ನಿರ್ವಾಣ ಬೇಡಿಕೆಯಿದ್ದು, ಪ್ರಸ್ತುತ ಯಡ್ತರೆಯಲ್ಲಿ ನಿರ್ವಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಡಿಪೋ ಮಂಜೂರಾತಿಗೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಾರಿಗೆ ಸಚಿವರಿಗೆ ಮನವಿ ನೀಡಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು.

ಬೈಂದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ವಾತನಾಡಿದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದೆ, ಆದರೆ ನಿಲ್ದಾಣದಲ್ಲಿ ನೀರಿನ ಸಮಸ್ಯೆಯಿಂದಾಗಿ ಉದ್ಘಾಟನಾ ಕಾರ್ಯ ವಿಳಂಬಗೊಳ್ಳುತ್ತಿದೆ, ಈ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿಯೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

ಚಾಲಕ, ನಿರ್ವಾಹಕ ಸಿಬ್ಬಂದಿ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಜೂನ್ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಂಡು ಸಿಬ್ಬಂದಿ ನಿಯೋಜನೆಗೊಳ್ಳಲಿದ್ದಾರೆ. ಆ ಬಳಿಕ ಪರ್ಮಿಟ್ ಹೊಂದಿರುವ ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ವಾಹಿತಿ ನೀಡಿದರು.

ಗ್ಯಾರಂಟಿಯಿಂದ 192.34 ಕೋಟಿ

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಬೈಂದೂರು ತಾಲೂಕಿಗೆ ಇದುವರೆಗೆ ಸುವಾರು 192.34 ಕೋಟಿ ರೂ. ವೆಚ್ಚ ವಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ 102.14 ಕೋಟಿ ಜವಾ ಆಗಿದೆ. ಗೃಹಜ್ಯೋತಿ ಯೋಜನೆಯಿಂದ 38.68 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜವಾ ವಾಡಲಾಗಿದೆ. ಯುವನಿಧಿ ಯೋಜನೆಯಡಿ 342 ಫಲಾನುಭವಿಗಳಿಗೆ 59.34 ಲಕ್ಷ ರೂ. ಜವಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1.36 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, 50.91 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಕುವಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net