

ಬೆಳಗಾವಿ:ಮಾರಿಹಾಳ ಠಾಣೆ ವ್ಯಾಪ್ತಿಯ ಸುಳೇಭಾವಿ ಗ್ರಾಮದಲ್ಲಿ ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಮೃತಪಟ್ಟದ್ದಾರೆ.
ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41) ಎಂಬ ಮಹಿಳೆಯರು ಮೃತಪಟ್ಟಿದ್ದಾರೆ.
ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸ್ವಚ್ಛಗೊಳಿಸಿದ್ದರು. ಸ್ವಚ್ಛ ಮಾಡಿದ ನೀರಿನಲ್ಲಿ ವಿದ್ಯುತ್ ತಂತಿ ಕಟ್ ಆಗಿ ಕೆಳಕ್ಕೆ ಬಿದ್ದಿತ್ತು. ಎಲ್ಲ ಕೆಲಸ ಮುಗಿಸಿ ಹೊರಗೆ ಬರುವಾಗ ಕಬ್ಬಿಣದ ಗೇಟ್ ಹಾಕುವಾಗ ಓರ್ವ ಮಹಿಳೆಗೆ ವಿದ್ಯುತ್ ಸ್ಪರ್ಶವಾಗಿದೆ. ಕೂಡಲೇ ಈಕೆಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ