ಇಗ್ಗುತ್ತಪ್ಪ ದೇವಾಲಯಕ್ಕೆ ಒಡೆಯರ್ ಭೇಟಿ

ಇಗ್ಗುತ್ತಪ್ಪ ದೇವಾಲಯಕ್ಕೆ ಒಡೆಯರ್ ಭೇಟಿ
Published on

ನಾಪೋಕ್ಲು: ಕಕ್ಕಬೆ ಪಾಡಿ ಶ್ರೀ ಇಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಡು ಸುಭಿಕ್ಷೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ದೇವತಕ್ಕರು, ತಕ್ಕ ಮುಖ್ಯಸ್ಥರಾದ ಪರದಂಡ ಸುಮನ್ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಮುಖ್ಯ ಅರ್ಚಕ ಕುಶ ಭಟ್ ಪೂಜಾ ವಿಧಿ ವಿಧಾನ ನೆರವೇರಿಸಿ ತೀರ್ಥ ಪ್ರಸಾದ ನೀಡಿದರು.

ಇದಕ್ಕೂ ಮೊದಲು ಕಕ್ಕಬೆ ಪಟ್ಟಣದಲ್ಲಿ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರು ಸಂಸದರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಎಂಎಲ್ಸಿ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ವಿಧಾನಸಭಾ ಸ್ಪೀಕರ್ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯಕಾರಿ ಸಮಿತಿಯ ಯಮುನಾ ಚಂಗಪ್ಪ, ನೆಲ್ಲಚಂಡ ಕಿರಣ್ ಕಾರ್ಯಪ್ಪ, ಚಂಡಿರ ಜಗದೀಶ್, ಉಮಾ ಪ್ರಭು, ದಾಟಿ ಅಯ್ಯಪ್ಪ, ಪಂಚಾಯಿತಿ ಅಧ್ಯಕ್ಷ ಶಿಲ್ಪಾ ಲೋಕೇಶ್, ದೇವಾಲಯದ ಪಾರುಪತ್ತೆಗಾರ ಪರದಂಡ ಪ್ರಿನ್ಸ್ ತಮ್ಮಯ್ಯ, ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net