ಗ್ಯಾರಂಟಿ ಅಪಹಾಸ್ಯಗೈದವರಿಗೆ ದುಃಖ

30 TTH 01
ತೀರ್ಥಹಳ್ಳಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಕಿಮ್ಮನೆ ರತ್ನಾಕರ್ ಚಾಲನೆ ನೀಡಿದರು. ಆರ್.ಎಂ.ಮಂಜುನಾಥ ಗೌಡ, ಸುಶೀಲಾ ಶೆಟ್ಟಿ, ರಹಮತ್ ಉಲ್ಲಾ ಅಸಾದಿ, ಟಿ.ಎಲ್.ಸುಂದರೇಶ್, ಎನ್.ಶೈಲಾ ಇತರರಿದ್ದರು.
Published on

ತೀರ್ಥಹಳ್ಳಿ: ಪ್ರತಿಯೊಬ್ಬ ನಾಗರಿಕರಿಗೆ ಮೂಲ ಸೌಕರ್ಯ ಒದಗಿಸುವ ಮಹತ್ವದ ಜವಾಬ್ದಾರಿ ಕಾಂಗ್ರೆಸ್ ನಿರ್ವಹಿಸುತ್ತಿದೆ. ಬಡವರ ಸಬಲೀಕರಣಕ್ಕೆ ಐದು ಗ್ಯಾರಂಟಿ ಯೋಜನೆ ಜಾರಿಯಾಗಿದೆ. ಆರೋಗ್ಯ, ಶಿಕ್ಷಣದ ಬಗ್ಗೆ ಮುತುವರ್ಜಿ ವಹಿಸಿದರೆ ಕೌಟುಂಬಿಕ ಸ್ಥಿರತೆ ಸೃಷ್ಟಿಯಾಗಲಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿಶ್ವಾಸ ವ್ಯಕ್ತಪಡಿಸಿದರು.
ಸೊಪ್ಪುಗುಡ್ಡೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಕೆಲವರು ಗ್ಯಾರಂಟಿ ಕಾರ್ಡ್, ಭರವಸೆಗಳನ್ನು ಅಪಹಾಸ್ಯ ಮಾಡಿದ್ದರು. ಅನುಷ್ಠಾನ ಮಾಡಲ್ಲ ಸುಳ್ಳು ಹೇಳುತ್ತಿದ್ದಾರೆ ಎಂಬ ಗುಮಾನಿ ಹರಡಿಸಿದ್ದರು. ಯೋಜನೆ ಅನುಷ್ಠಾನವಾಗಿದ್ದು ಟೀಕಿಸಿ, ಖಂಡಿಸಿದವರು ಇದೀಗ ದುಃಖಿತರಾಗಿದ್ದಾರೆ. ಯೋಜನೆ ರಾಷ್ಟ್ರಾದ್ಯಂತ ಸದ್ದು ಮಾಡಿದ್ದು ದೇಶದ ಜನರಿಗೂ ಸಿಗುವಂತಾಗಲಿ ಎಂದು ಹೇಳಿದರು.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮನೆಯ ಯಜಮಾನಿಗೆ ಸರ್ಕಾರದ ಸೌಲಭ್ಯ ನೇರವಾಗಿ ಲಭಿಸುತ್ತಿದ್ದು ಕುಟುಂಬದ ಆರ್ಥಿಕ ಸ್ಥಿತಿಗತಿ ಉತ್ತೇಜನಗೊಳ್ಳಲಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿದ ವಾಗ್ದಾನ ಉಳಿಸಿಕೊಂಡಿದೆ. ಶಕ್ತಿ ಯೋಜನೆ ಅನುಷ್ಠಾನದಲ್ಲಿ ಮಹಿಳೆಯರು ಸಾರ್ವಜನಿಕವಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net