

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಮನೆಯಲ್ಲಿ ದಾಸ್ತಾನು ಮಾಡಿದ್ದ ಮಹಿಳೆಯನ್ನು ಶುಕ್ರವಾರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಹೊಸ ಕುರುಬರ ಬೀದಿಯ ನಿವಾಸಿ ವಹೀದಾ(39) ಬಂಧಿತ ಆರೋಪಿ. ಇವರ ನಿವಾಸದಲ್ಲಿ 5 ಚೀಲದಲ್ಲಿ 196 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಅಕ್ಕಪಕ್ಕದ ಮನೆಗಳಲ್ಲಿ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ ಐ ವರ್ಷಾ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.