ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ

6manju7
Published on

ಬೆಳಗಾವಿ: ಇಲ್ಲಿನ ಸದಾಶಿವನಗರ ಮುಖ್ಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಎಪಿಎಂಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಶ್ರೀನಗರದ ಆಟೋಚಾಲಕ ಸಂತೋಷ ಜಾಧವ (38) ಬಂಧಿತ. ಮಂಗಳವಾರ ರಾತ್ರಿ ಹೋಟೆಲ್​ನಲ್ಲಿ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಡ್ಡರವಾಡಿಯ ಮಹಾದೇವಿ ಕರೆಣ್ಣವರ (45) ಅವಳನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ್ದನು. ಹತ್ತು ಸಾವಿರ ರೂ. ಕೊಟ್ಟಿರುವ ಹಣ ವಾಪಸ್​ ಕೇಳಿದ್ದಕ್ಕೆ ಕೊಲೆ ಮಾಡಿದ್ದಾನೆ. ಕೊಲೆ ಪ್ರಕರಣದಲ್ಲಿ ಸ್ಯಾಗಳು ಹಾಗೂ ಪ್ರತ್ಯಕ್ಷದರ್ಶಿಗಳು ಸಿಕ್ಕಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಬೋರಸೆ ಭೂಷಣ ಗುಲಾಬರಾವ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net