ಮಹಿಳೆ ಕುಸಿದು ಬಿದ್ದು ಮೃತ್ಯು

Death
Published on

ಪಡುಬಿದ್ರಿ: ಕಾಪು ತಾಲೂಕು ಇನ್ನಂಜೆಯ ಆಶ್ರಮದ ಮಹಿಳೆಯೊಬ್ಬರು ಮಂಗಳವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ರತ್ನಮ್ಮಾ ಮೃತಪಟ್ಟವರು. ಮಾನಸಿಕ ಅಸ್ವಸ್ಥರಾಗಿ ಉಡುಪಿಯಲ್ಲಿ ತಿರುಗಾಡುತ್ತಿದ್ದ ಅವರನ್ನು ಆಶ್ರಮಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದು ಖಚಿತವಾಗಿದೆ. ಮೃತದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net