ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ, ನಾಲ್ವರ ವಿರುದ್ಧ ಪ್ರಕರಣ

madhu
ಆತ್ಮಹತ್ಯೆ ಮಾಡಿಕೊಂಡ ಮಧು
Published on

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷ ಸೇವಿಸಲು ಪ್ರಚೋದನೆ ನೀಡಿದ ಆರೋಪದ ಮೇಲೆ ನಾಲ್ವರ ವಿರುದ್ಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ತರಲಘಟ್ಟದ ಮಧು ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವರು. ಮಧು ಪರಿಚಯಸ್ಥರ ಜತೆ ಶಿಕಾರಿಪುರಕ್ಕೆ ತೆರಳಿ ಮನೆಯೊಂದನ್ನು ಸ್ವಚ್ಛ ಮಾಡಿ ವಾಪಸ್ ಬರುವಾಗ ಪರಿಚಯಸ್ಥನ ಸಂಬಂಧಿಗಳು ಅಡ್ಡಗಟ್ಟಿ ಅನೈತಿಕ ಸಂಬಂಧದ ಆರೋಪ ಮಾಡಿದ್ದರು.
ಇದರಿಂದ ಮನನೊಂದು ಮಧು ವಿಷ ಸೇವಿಸಿದ್ದರು ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net