ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು

suicide
Published on

ಚನ್ನಪಟ್ಟಣ: ತಾಲೂಕಿನ ಮೈಲನಾಯಕ್ಕನಹಳ್ಳಿಯಲ್ಲಿ ಮಂಗಳವಾರ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗ್ರಾಮದ ಮಡಿವಾಳರ ಲೀಲಾವತಿ (50) ಮೃತೆ.

ಹಲವು ಕಡೆಗಳಲ್ಲಿ ಪಡೆದಿದ್ದ ಸಾಲ ತೀರಿಸಲಾಗದೆ ಪರಿತಪಿಸುತ್ತಿದ್ದರು ಎನ್ನಲಾಗಿದೆ. ಇದೇ ಯೋಚನೆಯಲ್ಲಿ ಮಂಗಳವಾರ ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಲಕಾರಿಯಾಗದೇ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನ ಬಗ್ಗೆ ಅನುಮಾನ ಇರುವುದಾಗಿ ಲೀಲಾವತಿ ಪತಿ ಶಿವಣ್ಣ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಬು‘ವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೈಕ್ರೋ ಫೈನಾನ್ಸ್ ಕಿರುಕುಳವೇ?

ಗ್ರಾಮದಲ್ಲಿ ವ್ಯವಸಾಯ ಮತ್ತು ಕೂಲಿ ಕೆಲಸ ಮಾಡಿಕೊಂಡಿದ್ದ ಲೀಲಾವತಿ-ಶಿವಣ್ಣ ದಂಪತಿಗೆ ಪುತ್ರಿಯಿದ್ದು, ಆಕೆಯನ್ನು ಮದುವೆ ಮಾಡಲಾಗಿತ್ತು. ಈಕೆ ಗೃಹ ಉಪಯೋಗಕ್ಕಾಗಿ ನಾಲೈದು ಫೈನಾನ್ಸ್ ಕಂಪನಿ ಹಾಗೂ ಕೆಲ ಸಂಘಗಳಲ್ಲಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಸಂಘದ ಹಣದ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಪತಿ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net