

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವುದಲ್ಲದೆ, ಬೆತ್ತಲೆ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ನನಗೆ ಬೆದರಿಕೆ ಒಡ್ಡಲಾಗಿದೆ ಎಂದು ಮಹಿಳೆಯೊಬ್ಬರು ನಗರದ ಪ್ರತಿಷ್ಠಿತ ಹೋಟೆಲ್ ವ್ಯವಸ್ಥಾಪಕ ಹಾಗೂ ಆತನ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು ರಸ್ತೆಯಲ್ಲಿರುವ ಹೋಟೆಲ್‌ವೊಂದರ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದ ನನಗೆ ಹೋಟೆಲ್‌ನ ವ್ಯವಸ್ಥಾಪಕ ಸಲುಗೆ ಬೆಳೆಸಿದ್ದಲ್ಲದೆ, ಮದುವೆ ಅಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. ಇದರಿಂದ ಗರ್ಭವತಿಯಾಗಿದ್ದ ನನಗೆ ಬಲವಂತವಾಗಿ ಮಾತ್ರೆ ತಿನ್ನಿಸಿ ಗರ್ಭಪಾತ ಮಾಡಿಸಿದ್ದ. ಕೆಲ ದಿನಗಳ ಬಳಿಕ ಬೆತ್ತಲೆ ಫೋಟೋ, ವಿಡಿಯೋ ಇಟ್ಟುಕೊಂಡು ಅತ್ಯಾಚಾರವೆಸಗಿದ್ದು, ಮತ್ತೆ ಗರ್ಭವತಿ ಅಗಿದ್ದೇನೆ. ಈಗ ಮದುವೆ ಆಗುವಂತೆ ಕೇಳಿದರೆ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ, ಜಾತಿ ನಿಂದನೆ ಮಾಡಿದ್ದಾನೆ. ಇದಕ್ಕೆ ಹೋಟೆಲ್ ವ್ಯವಸ್ಥಾಪಕನ ತಂದೆಯ ಸಹಕಾರವೂ ಇದೆ. ಆದ್ದರಿಂದ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ 27 ವರ್ಷದ ಮಹಿಳೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.