30 ಕ್ಷೇತ್ರದಲ್ಲಾದರೂ ನಮಗೆ ಅವಕಾಶ ಕೊಡಿ: ಮಹಿಳಾ ಕಾಂಗ್ರೆಸ್ ಹಕ್ಕೊತ್ತಾಯ

congress
Published on

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 30 ಕಡೆಯಾದರೂ ಸ್ಪರ್ಧಿಸಲು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಕಾಂಗ್ರೆಸ್​ ನಾಯಕರ ಮುಂದೆ ಮಹಿಳಾ ಕಾಂಗ್ರೆಸ್ ಬೇಡಿಕೆ ಇಟ್ಟಿದೆ.

ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್​ ಮಹಿಳಾ ನಾಯಕಿಯರು, ರಾಜ್ಯದ 224 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಕನಿಷ್ಠ 33 ಕ್ಷೇತ್ರದಲ್ಲಾದರೂ ಟಿಕೆಟ್​ ಕೊಡಬೇಕು ಎಂದು ಆಗ್ರಹಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಈ ಬಾರಿ ಪಕ್ಷದ ಟಿಕೆಟ್‌ಗೆ 109 ಮಹಿಳೆಯರು ಅರ್ಜಿ ಹಾಕಿದ್ದಾರೆ. ಗೆಲ್ಲುವ ಸಾಮರ್ಥ್ಯ ಇರುವವರ ಸ್ಕ್ರೀಟಿನಿ ನಡೆಯುತ್ತಿದೆ ಎಂದರು.

ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿಯವರು ಜನವರಿ 16ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, 'ನಾ ನಾಯಕಿ' ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ವೇಳೆ ಕೂಡ ನಮ್ಮ ಬೇಡಿಕೆಯನ್ನು ಅವರ ಬಳಿ ಮಂಡಿಸುತ್ತೇವೆ ಎಂದರು.

ಇದೇ ವೇಳೆ ಪ್ರಿಯಾಂಕ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಕಾಂಗ್ರೆಸ್ ನಾಯಕಿಯರು ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net