

ಯಾದಗಿರಿ: ಸುರಪುರ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಹುಣಸಗಿ ತಾಲೂಕಿನ ಹೆಬ್ಬಾಳ ಬಿ ಗ್ರಾಮದ ಶಾಂತಾ(40) ಎಂಬಾಕೆ ಯಾದಗಿರಿ ಜಿಲ್ಲೆ ಸುರಪುರ ರಾಜಾ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲೇ ಸೋಮವಾರ ರಾತ್ರಿ ಇದ್ದರು. ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿರಿ ಡಾ.ರಾಜ್ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು
ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಬಸ್ ನಿಲ್ದಾಣದಲ್ಲೇ ತಂಗಿದ್ದ ಮಹಿಳೆ ಬೆಳಗಾಗುವಷ್ಟರಲ್ಲಿ ಸತ್ತಿರುವುದು ಸಾವಿನ ಬಗ್ಗೆ ಅನುಮಾನ ಮೂಡಿಸಿದೆ. ಮರೋಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.