ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವು

Death
Published on

ಮೈಸೂರು: ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟಿರುವ ಶಾಕುಂತಲ (25) ಗರ್ಭಿಣಿಯಾಗಿದ್ದರು. ಆಕೆಯ ಪತಿ ಚರಣ್​ ರಾಜ್ ವಿರುದ್ಧ ಕೊಲೆ ಮಾಡಿ ನೇಣು ಬಿಗಿದ ಆರೋಪ ಕೇಳಿಬಂದಿದೆ. ವರದಕ್ಷಿಣೆಗಾಗಿ ಈ ರೀತಿ ಮಾಡಿದ್ದಾನೆ ಎಂದು ಶಾಂಕುತಲ ಪಾಲಕರು ಆರೋಪಿಸಿದ್ದಾರೆ.

ಇನ್ನೊಂದೆಡೆ ಮಾತುಕತೆ ಮೂಲಕ ಇತ್ಯರ್ಥ ಪಡಿಸಿಕೊಳ್ಳುವಂತೆ ಹೇಳಿ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ಕೂಡ ಹಿಂದೇಟು ಹಾಕುತ್ತಿದ್ದಾರೆಂದು ಪಾಲಕರು ಆರೋಪಿಸಿದ್ದಾರೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net