

ವಿಜಯವಾಣಿ ಸುದ್ದಿಜಾಲ ಧಾರವಾಡ
ಬೈಕ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದ ಬಳಿ ಗುರುವಾರ ನಡೆದಿದೆ. ನವಲಗುಂದ ರಸ್ತೆಯ ಅಯೋಧ್ಯಾನಗರದ ಪ್ರಿಯಾ ಪ್ರಕಾಶ ಇಚ್ಚಂಗಿ (55) ಮೃತ ಮಹಿಳೆ. ಇವರು ಪತಿಯೊಂದಿಗೆ ಬೈಕ್ ಮೇಲೆ ಧಾರವಾಡದಿಂದ ಅಯೋಧ್ಯಾನಗರಕ್ಕೆ ಹೋಗುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿತ್ತು. ತೀವ್ರ ಗಾಯಗೊಂಡಿದ್ದ ಪ್ರಿಯಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.