

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.
ಅಮೃತಾ ಶರ್ಮ 27 ಮೃತ ಮಹಿಳೆ. ಅಪಾರ್ಟ್ಮೆಂಟ್ನ ಹತ್ತನೇ ಮಹಡಿ ಬಾಲ್ಕನಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಅಮೃತಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದಳು. ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದರು ಎನ್ನಲಾಗಿದೆ.
ಲಖನೌ ಮೂಲದ ಅಮೃತಾ ಕುಟುಂಬದ ಜೊತೆ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಲ್ಲಿ ವಾಸವಾಗಿದ್ದರು. ಕಿಚನ್ಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಹಾರಿದ್ದಾರೆ. ಕೂಡಲೇ ಸ್ಥಳೀಯರು ಮಹಿಳೆಯನ್ನು ಅಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆ ಫಲಿಸದೇ ಅಮೃತಾ ಶರ್ಮ ಕೊನೆಯುಸಿರೆಳದಿದ್ದಾರೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಅಸ್ಪತ್ರೆಗೆ ರವಾನೆ ಮಾಡಲಾಗಿದೆ.