

ಮಂಡ್ಯ:ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣವನ್ನು ಮಾಡುವ ಅವಕಾಶವನ್ನು ನೀಡಲಾಗುತ್ತದೆ. ಈ ಯೋಜನೆ ಆರಂಭವಾದ ಬಳಿಕ ಬಸ್ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯು ಹೆಚ್ಚಳವಾಗಿದೆ. ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. ಮಹಿಳೆ ವೇಗವಾಗಿ ಬಂದ ಬಸ್ನಿಂದಾಗಿ ಗಾಬರಿಗೊಂಡ ಪರಿಣಾಮ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರಿಗೆ ಇಲಾಖೆಯ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳನ್ನು ಒಳಗೊಂಡ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. 2022 ಮತ್ತು 2023 ರಲ್ಲಿ ನಡುವಿನ ಅವಧಿಯಲ್ಲಿ ಬಿಎಂಟಿಸಿ ಬಸ್ ಅಪಘಾತಗಳಿಂದ 71 ಜನರು ಮತ್ತು ಕೆಎಸ್ಆರ್ಟಿಸಿ ಬಸ್ ಅಪಘಾತಗಳಿಂದ 23 ಜನರು ಸಾವನ್ನಪ್ಪಿದ್ದಾರೆ. ಇಲಾಖೆ ಮಾಹಿತಿ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳು 94 ಮಾರಣಾಂತಿಕ ಮತ್ತು 233 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ.
2020 ರಿಂದ 2021 ರ ನಡುವೆ, ಬಿಎಂಟಿಸಿ ಬಸ್ಗಳು 49 ಮಾರಣಾಂತಿಕ ಮತ್ತು 107 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಅದೇ ಅವಧಿಯಲ್ಲಿ, ಕೆಎಸ್ಆರ್ಟಿಸಿ ಬಸ್ಗಳು 12 ಮಾರಣಾಂತಿಕ ಮತ್ತು 15 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ.