ಹಾವು ಕಡಿತದಿಂದ ಮಹಿಳೆ ಸಾವು

snake biten
Published on

ಹಾನಗಲ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಪಟ್ಟಣದ ಕಲ್ಲಹಕ್ಕಲ ಬಡಾವಣೆಯ ವಿಜಯಲಕ್ಷ್ಮೀ ಕೋಟೆಪ್ಪ ಮಲಗುಂದ (40) ಮೃತಪಟ್ಟ ಮಹಿಳೆ. ಪಟ್ಟಣದ ಹೊರಭಾಗದ ಬಿಲ್ಲೇಶ್ವರ ದೇವಸ್ಥಾನದ ಬಳಿಯ ಮಂಜುನಾಥ ನಾಗಜ್ಜನವರ ಎಂಬುವರ ತೋಟಕ್ಕೆ ಶನಿವಾರ ಕೂಲಿ ಕೆಲಸಕ್ಕೆ ತೆರಳಿದಾಗ ಮಹಿಳೆಗೆ ಹಾವು ಕಚ್ಚಿತ್ತು. ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹಾವೇರಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಸ್ಪಂದಿಸದೇ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net