ತಂದೆ-ತಾಯಿ, ಪತಿಯನ್ನು ಕಳೆದುಕೊಂಡ ಮಹಿಳೆ ನೇಣಿಗೆ ಶರಣು

Published on

ರಾಣೆಬೆನ್ನೂರ: ತಂದೆ-ತಾಯಿ ಹಾಗೂ ಪತಿಯನ್ನು ಕಳೆದುಕೊಂಡ ಮಹಿಳೆಯೊಬ್ಬಳು ಜೀವನದಲ್ಲಿ ಜಿಗುಪ್ಸೆ ಹೊಂದಿ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕರೂರ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ರೂಪಾ ಹನುಮಂತಪ್ಪ ಹಿರೇಹೊಳಿ (27) ಮೃತ ಮಹಿಳೆ.
ಈಕೆ ತನ್ನ ತಂದೆ-ತಾಯಿ ಹಾಗೂ ಪತಿಯನ್ನು ಕಳೆದುಕೊಂಡ ದುಖಃದಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದಳು. ಇದರಿಂದಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net