

ಗಜೇಂದ್ರಗಡ: ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಗಾಯಗೊಂಡು, ಮನೆಗೆ ಹಾನಿಯಾದ ಘಟನೆ ತಾಲೂಕಿನ ಬೆಣಚಮಟ್ಟಿ ತಾಂಡಾದಲ್ಲಿ ಶುಕ್ರವಾರ ನಡೆದಿದೆ.
ಬೆಣಚಮಟ್ಟಿ ತಾಂಡಾದ ಗಂಗನಗೌಡ ಕಳಕನಗೌಡ ಪಾಟೀಲ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡಿದೆ. ಮನೆಯ ಸದಸ್ಯರೆಲ್ಲರೂ ಜಮೀನುಗಳಿಗೆ ತೆರೆಳಿದ ಹಿನ್ನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಪಕ್ಕದ ಮನೆಯ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ 5 ತೊಲೆ ಬಂಗಾರ, 3 ಲಕ್ಷ ರೂ. ನಗದು, 4 ತೊಲೆ ಬೆಳ್ಳಿ ಬೆಂಕಿಗಾಹುತಿಯಾಗಿದೆ ಎಂದು ಮನೆಯವರು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಯಲಬುರ್ಗಾದ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಗಜೇಂದ್ರಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ಪಿಎಸ್‌ಐ ಸೋಮನಗೌಡ ಗೌಡ್ರ, ಗ್ರಾಮ ಲೆಕ್ಕಾಧಿಕಾರಿ ಶಬ್ಬೀರ್ ನಿಶಾನದಾರ ಭೇಟಿ ನೀಡಿ ಮಾಹಿತಿ ಪಡೆದರು. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಇದ್ದರು.