ಸಿಡಿಲು ಬಡಿದು ಮಹಿಳೆ ಸಾವು

lightning
Published on

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಶ್ರಯ ಬಿ ಬಡಾವಣೆಯ ಲಕ್ಷ್ಮೀಬಾಯಿ (28) ಮೃತ ಮಹಿಳೆ. ಸಂಜೆ ಕುರಿಗಳಿಗೆ ಮೇವು ತರಲು ಹೋದಾಗ ಸಿಡಿಲು ಬಡಿದಿದೆ.
ಲಕ್ಷ್ಮಿಬಾಯಿ ಅವರ ಪತಿ ಕುಮಾರ ನಾಯಕ ಗಾರೆ ಕೆಲಸ ಮಾಡಿಕೊಂಡಿದ್ದು ದಂಪತಿ ಆಶ್ರಯ ಬಡಾವಣೆಯಲ್ಲಿ ನೆಲೆಸಿದ್ದರು. ಘಟನಾ ಸ್ಥಳಕ್ಕೆ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net