ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು

BMTC Bus
ಸಾಂದರ್ಭಿಕ ಚಿತ್ರ
Published on

ಬೆಂಗಳೂರು:  ನಗರದ ಸುಬ್ಬಯ್ಯ ವೃತ್ತದ ಬಳಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ನಗರದ ಕಬ್ಬನ್ ಪೇಟೆ ನಿವಾಸಿ. ಪುಷ್ಪಾ ಅವರು ಮನೆಯಿಂದ ಬೇಕರಿಗೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ

ಬಸ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು.

ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net